ಭ್ರಷ್ಟರಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತರು ಶಾಕ್ ನೀಡಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಯಿಂದ ಚಿನ್ನ, ನಗದು, ವಿದೇಶಿ ಕರೆನ್ಸಿ ಸೇರಿದಂತೆ ಕಡತಗಳನ್ನ ವಶಪಡಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ದಾಳಿ ನಡೆಸಿದ್ದು, ಬೆಳ್ತಂಗಡಿ ಮಾಜಿ ಸಚಿವ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ.
ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ನಗದು ಪತ್ತೆ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ಗಂಗಾಧರಯ್ಯ್ ಮನೆಯಲ್ಲಿ ಅರಿಶೀಲನೆ ನಡೆಸಿ, ಚಿನ್ನಾಭರಣ, ನಗದನ್ನ ವಶಪಡಿಸಿಕೊಂಡಿದ್ದಾರೆ. ವಿದೇಶಿ ಕರೆನ್ಸಿ ಕೂಡ ವಶಪಡಿಸಿಕೊಂಡಿದ್ದಾರೆ. 80 ಲಕ್ಷ ನಗದು ಹಣ, 50 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.
ಕೋಲಾರ ಜಿಲ್ಲೆ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಇನ್ನು ಶಿವಮೊಗ್ಗ ನಗರದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ವನ್ಯಜೀವಿ ವಿಭಾಗದ ನಿವೃತ್ತ ಡಿಸಿಎಫ್ ನಾಗರಾಜ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.