Kornersite

Just In National State

ಪೊಲೀಸರ ಮೇಲೆ ಹಲ್ಲೆ ಮಾಡಿದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ: Viral Video

Hyderabad : ತೆಲಂಗಾಣದಲ್ಲಿನ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ವೈಎಸ್‌ಆರ್‌ ಪಕ್ಷದ ಶರ್ಮಿಳಾ ರೆಡ್ಡಿ ಅವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತೆಲಂಗಾಣ ಸರ್ಕಾರ ನಡೆಸುವ ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಎಸ್‌ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದಿದ್ದರು. ಆಗ ಮಾತಿನ ಚಕಮಕಿ ನಡೆದು, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.


ಎಎನ್‌ಐ ಹಂಚಿಕೊಂಡಿರುವ ವಿಡಿಯೋದಲ್ಲಿ ಪೊಲೀಸರು, ಶರ್ಮಿಳಾ ಅವರ ಕಾರನ್ನು ತಡೆಯಲು ಯತ್ನಿಸಿದ್ದಾರೆ. ಆದರೂ ಅವರು ಪೊಲೀಸರನ್ನು ದೂರ ಸರಿಯುವಂತೆ ಹೇಳಿ ವಿಶೇಷ ತನಿಖಾ ಸಂಸ್ಥೆ ಕಚೇರಿ ಮುಂದೆ ಬಂದು ಧರಣಿ ಕುಳಿತಿದ್ದಾರೆ. ನಂತರ ಮಹಿಳಾ ಪೊಲೀಸ್ ಸಿಬ್ಬಂದಿ ಅಲ್ಲಿಂದ ಏಳಿಸಿ ಕಳುಹಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಜೊತೆಯೂ ಶರ್ಮಿಳಾ ವಿರೋಧ ವ್ಯಕ್ತಪಡಿಸಿದ್ದಾರೆ.


ಮತ್ತೊಂದು ವಿಡಿಯೋದಲ್ಲಿ ಪುರುಷ ಪೊಲೀಸ್ ಅಧಿಕಾರಿಯ ಕೆನ್ನೆಗೆ ಶರ್ಮಿಳಾ ಬಾರಿಸುತ್ತಿರುವ ದೃಶ್ಯವಿದೆ. ಈ ವೇಳೆ ಮಹಿಳಾ ಪೊಲೀಸರು ಮ್ಯಾಡಮ್ ಮ್ಯಾಡಮ್ ಎಂದು ಕರೆದರು ಕೇಳದ ಶರ್ಮಿಳಾ ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಿದ್ದಾರೆ. ಅಲ್ಲದೇ ಮಹಿಳಾ ಸಿಬ್ಬಂದಿ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾರೆ.


ಈ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೆ ಚಂದ್ರಶೇಖರ್ ರಾವ್‌ ( K Chandrashekar Rao), ನೇತೃತ್ವದ ಸರ್ಕಾರವನ್ನು ವಿರೋಧಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಬಂಧಿಸಲಾಗಿದೆ. ಶರ್ಮಿಳಾ ರೆಡ್ಡಿ, ಈ ಪ್ರಕರಣವನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಕಳೆದ ತಿಂಗಳು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿತ್ತು. ಜಗನ್ ಮೋಹನ್ ರೆಡ್ಡಿ ((Jagan Mohan Reddy) ಸಹೋದರಿಯಾಗಿರುವ ಶರ್ಮಿಳಾ ಇತ್ತೀಚೆಗೆ ತೆಲಂಗಾಣದಾದ್ಯಂತ (Telangana) ದೊಡ್ಡ ಮೆರವಣಿಗೆ ನಡೆಸಿದ್ದಾರೆ. ಆಂಧ್ರದಲ್ಲಿ ಅಧಿಕಾರದಲ್ಲಿರುವ ತನ್ನ ಸಹೋದರನ ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೂ ತನ್ನ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ