Kornersite

Crime International

Crime News: ಪೊಲೀಸ್ ಠಾಣೆಯಲ್ಲಿ ಬಾಂಬ್ ಬ್ಲಾಸ್ಟ್; 12 ಜನ ಪೊಲೀಸರು ಬಲಿ!

ಪಾಕಿಸ್ತಾನದ ಸ್ವಾತ್ ಪ್ರದೇಶದಲ್ಲಿನ ಭಯೋತ್ಪಾದನಾ ನಿಗ್ರಹ ಇಲಾಖೆಯ ಪೊಲೀಸ್ ಠಾಣೆಯಲ್ಲಿ ನಡೆದ ಸ್ಪೋಟಗಳಲ್ಲಿ ಕನಿಷ್ಠ 12 ಜನ ಪೊಲೀಸರು ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಪೊಲೀಸ್ ಠಾಣೆಯೊಳಗೆ ಸಂಭವಿಸಿದ ಎರಡು ಸ್ಫೋಟಗಳಿಂದ ಕಟ್ಟಡ ನಾಶವಾಗಿದೆ. ಭದ್ರತಾ ಅಧಿಕಾರಿಗಳು ಪ್ರಾತ್ಯದಾದ್ಯಂತ ಹೆಚ್ಚಿನ ಅಲರ್ಟ್ ನಲ್ಲಿದ್ದರೂ ಈ ಘಟನೆ ನಡೆದಿದೆ ಎಂದು ಖೈಬರ್ ಪಖ್ತುಂಕ್ವಾ ಪೊಲೀಸ್ ಮಹಾನಿರೀಕ್ಷಿಕ ಅಖ್ತರ್ ಹಯಾತ್ ಖಾನ್ ತಿಳಿಸಿದ್ದಾರೆ.

ಸಿಟಿಡಿ ಡಿಐಜಿ ಖಾಲಿದ್ ಸೊಹೈಲ್ ಮಾತನಾಡಿ, ಸ್ಫೋಟವು ಆತ್ಮಹತ್ಯಾ ದಾಳಿಯಲ್ಲ. ಮದ್ದುಗುಂಡುಗಳು ಮತ್ತು ಮಾರ್ಟರ್ ಶೆಲ್ ಗಳನ್ನು ಸಂಗ್ರಹಿಸಿದ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸ್ ಠಾಣೆ ಮೇಲೆ ಯಾವುದೇ ದಾಳಿ ಅಥವಾ ಗುಂಡಿನ ದಾಳಿ ನಡೆದಿಲ್ಲ. ಸ್ಪೋಟದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳಗಳು ಸ್ಫೋಟದ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿವೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ