ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪುನಃ ಆರಂಭವಾಗಿರುವ ಪ್ರತಿಭಟನೆಯಲ್ಲಿ ಪ್ರಮುಖ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಕೂಡ ಭಾಗವಹಿಸಿದ್ದಾರೆ. ಸದ್ಯ ಹೋರಾಟಗಾರರಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra), ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಸಾಥ್ ನೀಡಿದ್ದಾರೆ.

ನಮ್ಮ ಅಥ್ಲೀಟ್‌ಗಳು ನ್ಯಾಯಕ್ಕಾಗಿ ಬೀದಿಗಿಳಿದಿರುವುದು ತುಂಬಾ ನೋವನ್ನುಂಟು ಮಾಡಿದೆ. ಅವರು ನಮ್ಮ ಮಹಾನ್ ರಾಷ್ಟ್ರವನ್ನು ಪ್ರತಿನಿಧಿಸಲು ಮತ್ತು ನಮಗೆ ಹೆಮ್ಮೆ ತರಲು ಶ್ರಮಿಸಿದ್ದಾರೆ. ರಾಷ್ಟ್ರವಾಗಿ, ಪ್ರತಿಯೊಬ್ಬ ವ್ಯಕ್ತಿಯ ಸಮಗ್ರತೆ ಮತ್ತು ಘನತೆಯನ್ನು ಕಾಪಾಡುವ ಜವಾಬ್ದಾರರು, ಇದು ಎಂದಿಗೂ ಸಂಭವಿಸಬಾರದು. ಇದೊಂದು ಸೂಕ್ಷ್ಮ ವಿಷಯವಾಗಿದ್ದು ನಿಷ್ಪಕ್ಷಪಾತ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸಬೇಕಿದೆ. ನ್ಯಾಯವನ್ನು ಒದಗಿಸುವುದನ್ನು ಖಾತ್ರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು,” ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದು ವಿಷಾದ ವ್ಯಕ್ತಪಡಿಸಿದ್ದಾರೆ.

ಇನ್ನು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಕೂಡ ಇನ್ಸ್ಟಾಗ್ರಾಮ್ನಲ್ಲಿ ಸ್ಟೇಟಸ್ ಹಾಕಿ ಬೆಂಬಲ ಸೂಚಿಸಿದ್ದಾರೆ.
ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ ಪೈಲ್ವಾನರು ಅವರನ್ನು ಲೈಂಗಿಕ ಶೋಷಣೆಯ ಆರೋಪಗಳಲ್ಲಿ ಬಂಧಿಸದ ಹೊರತು ಪ್ರತಿಭಟನೆಯಿಂದ ಹಿಂತೆಗೆಯುವುದಿಲ್ಲ ಎಂದು ಸಂಕಲ್ಪ ಮಾಡಿದ್ದಾರೆ.