Kornersite

Crime Just In

Crime News: ಪತ್ನಿಗೆ ಬ್ಯೂಟಿ ಪಾರ್ಲರ್ ಗೆ ಹೋಗಬೇಡ ಎಂದ ಪತಿ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ!

Indore :‌ ಪತಿ- ಪತ್ನಿ ಅಂದ ಮೇಲೆ ಕೆಲವೊಂದಿಷ್ಟು ಭಿನ್ನಾಭಿಪ್ರಾಯಗಳು ಸಹಯ. ಆದರೆ, ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಮುನಿಸಿಕೊಳ್ಳುವುದು ಹೆಚ್ಚಾಗುತ್ತಿದೆ. ಹೀಗೆ ಮಹಿಳೆಯೊಬ್ಬರು ಪತಿಯ ಒಂದೇ ಮಾತಿಗೆ ಮುನಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ ನಲ್ಲಿ ನಡೆದಿರುವುದು ವರದಿಯಾಗಿದೆ.

ರೀನಾ ಯಾದವ್ (34) ಈ ರೀತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬಲರಾಮ್‌ ರೀನಾ ಯಾದವ್‌ ಎಂಬ ಮಹಿಳೆ ಜೊತೆ 15 ವರ್ಷದ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಪತ್ನಿಗೆ ಪತಿ ಬಲರಾಮ್‌ ತನ್ನ ಪತ್ನಿ ರೀನಾ ಅವರಿಗೆ ಬ್ಯೂಟಿ ಪಾರ್ಲರ್‌ ಹೋಗುವುದನ್ನು ನಿಲ್ಲಿಸು ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಸಿಟ್ಟಾಗಿದ್ದ ಪತ್ನಿ ರೀನಾ ಯಾದವ್‌ ಫ್ಯಾನಿಗೆ ಕೊರಳೊಡ್ಡಿ ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಪತಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೃತದೇಹವನ್ನು ಪೋಸ್ಟ್‌ ಮಾರ್ಟಂಗೆ ತೆಗೆದುಕೊಂಡು ಹೋಗಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ