Kornersite

Bengaluru Just In Karnataka Politics State

Karnataka Assembly Election: ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಬಿಜೆಪಿ; ಮಹಿಳೆಯರಿಗೆ ಬಂಪರ್ ಗಿಫ್ಟ್!?

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Karnataka Assembly Elections 2023)ಯ ಕಾವು ಜೋರಾಗಿದೆ. ಪಕ್ಷಗಳು ಒಂದಕ್ಕಿಂತ ಒಂದು ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕೊಡುಗೆಗಳನ್ನು ನೀಡುತ್ತಿವೆ.

ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವ ಬಯಕೆ ಹೊಂದಿರುವ ಕಾಂಗ್ರೆಸ್ (Congress) ಸಾಲು ಸಾಲು ಉಚಿತ ಘೋಷಣೆಗಳನ್ನು ಮಾಡಿದೆ. ಇನ್ನೊಂದೆಡೆ ಪಂಚರತ್ನ ಹೆಸರಿನಲ್ಲಿ ಜೆಡಿಎಸ್ (JDS) ಪಕ್ಷವು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಮ್ಮೆ ಅಧಿಕಾರದ ಕನಸು ಕಾಣುತ್ತಿರುವ ಬಿಜೆಪಿ, ನಾಳೆ ಬೆಂಗಳೂರಿನಲ್ಲಿ ಪ್ರಣಾಳಿಕೆ ಬಿಡುಗಡೆ (BJP Manifesto) ಮಾಡಲು ಮುಂದಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ನಾನು ಬೆಂಗಳೂರಿನಲ್ಲಿ ನಾಳೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ಹೆಣ್ಣು ಮಕ್ಕಳಿಗೆ ಬಸ್‌ನಲ್ಲಿ ಉಚಿತ ಬಸ್ ಪಾಸ್ ಕೊಡುವ ತೀರ್ಮಾನ ಮಾಡಲಾಗಿದೆ. ಈ ಕುರಿತು ನಾಳೆ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷವು ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದ್ದಾರೆ. ಮೋದಿ ಅವರು ಮಹಿಳೆಯರಿಗೆ ಯಾವ ರೀತಿ ಮಹತ್ವ ಕೊಟ್ಟಿದ್ದಾರೆ ಎನ್ನುವುದಕ್ಕೆ ಇದು ಉದಾಹರಣೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ನಾಯಕ ರಾಹುಲ್ ಗಾಂಧಿ, ನಮ್ಮ ನಾಯಕರು ಮೋದಿ, ಅಮಿತ್ ಶಾ. ಆ ರಾಹುಲ್ ಗಾಂಧಿ ಎಲ್ಲಿ? ಮೋದಿ, ಶಾ ಎಲ್ಲಿ? ಎದು ವ್ಯಂಗ್ಯವಾಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು