ವಿಜಯಪುರ : ಪ್ರೇಮಿಗಳಿಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಅಂಗಡಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಬೆಳಕಿಗೆ ಬಂದಿದೆ.

ಇಬ್ಬರೂ ಅಪ್ರಾಪ್ತ ವಯಸ್ಕರಾಗಿದ್ದು, ಶನಿವಾರ ಮನೆಯಿಂದ ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ಮನೆಯವರು ಅವರನ್ನು ಹುಡುಕಾಡುತ್ತಿದ್ದರು. ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಬ್ಬರೂ ಒಂದೇ ವೇಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಕ್ಕೂಬಾಯಿ ಮಾದರ (15) ಹಾಗೂ ಸಚಿನ್ ಮಾದರ (16) ಆತ್ಮಹತ್ಯೆ ಮಾಡಿಕೊಂಡವರು. ಗ್ರಾಮಸ್ಥರು ಹೊಲಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಎನ್ ಟಿಪಿಸಿ ಪೊಲೀಸ್ ಠಾಣಮೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.