Bangalore : ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕುಸಿತ ಕಾಣುತ್ತಿದ್ದ ಚಿನ್ನದ ಬೆಲೆ ಮತ್ತೆ ಈಗ ಏರಿಕೆಯತ್ತ ಮುಖ ಮಾಡಿದೆ. ಬೆಳ್ಳಿ ಬೆಲೆ ಸತತ 3ನೇ ದಿನವೂ ಏರಿಕೆ ಕಂಡಿದೆ. ಅಕ್ಷಯ ತೃತೀಯ ದಿನದಿಂದಲೂ ಚಿನ್ನದ ಬೆಲೆ ಬಹುತೇಕ ಇಳಿಕೆಯ ಹಾದಿಯಲ್ಲಿತ್ತು. ಈಗ ದಿಢೀರ್ ಏರಿಕೆಯಾಗಿದೆ.
ಚಿನ್ನವು ಪ್ರತಿ ಗ್ರಾಂಗೆ 80 ರೂ.ನಂತೆ ಏರಿಕೆ ಕಂಡಿದೆ. ಅಲ್ಲೇ, ದೇಶ ಹಾಗೂ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನ ಹಾಗೂ ಬೆಳ್ಳಿಗೆ ಭಾರೀ ಬೆಲೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 56,500 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 61,640 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 7,680 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,550 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 8,180 ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 56,500 ರೂ
24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 61,640 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 768 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂಗೆ):
ಮಲೇಷ್ಯಾ: 2,860 ರಿಂಗಿಟ್ (52,560 ರೂ)
ದುಬೈ: 2260 ಡಿರಾಮ್ (50,340 ರೂ)
ಅಮೆರಿಕ: 615 ಡಾಲರ್ (50,313 ರೂ)
ಸಿಂಗಾಪುರ: 837 ಸಿಂಗಾಪುರ್ ಡಾಲರ್ (51,385 ರೂ)
ಕತಾರ್: 2,320 ಕತಾರಿ ರಿಯಾಲ್ (52,120 ರೂ)
ಓಮನ್: 246 ಒಮಾನಿ ರಿಯಾಲ್ (52,270 ರೂ)
ಕುವೇತ್: 191.50 ಕುವೇತಿ ದಿನಾರ್ (51,139 ರೂ)