Kornersite

International Just In National

World Bank: ಭಾರತೀಯ ಮೂಲದ ವ್ಯಕ್ತಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ!

ಮುಂದಿನ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ (World Bank) ಭಾರತೀಯ ಮೂಲದ ಅಜಯ್ ಬಂಗಾ (Ajay Banga) ಆಯ್ಕೆಯಾಗಿದ್ದಾರೆ. ಈ ಕುರಿತು ಸ್ವತಃ ವಿಶ್ವಬ್ಯಾಂಕ್‌ ದೃಢಪಡಿಸಿದೆ. ಮುಂದಿನ 5 ವರ್ಷಗಳ ಅವಧಿಗೆ ಬಂಗಾ ವಿಶ್ವ ಬ್ಯಾಂಕ್‌ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

187 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ ವಿಶ್ವ ಬ್ಯಾಂಕ್ ಅಧ್ಯಕ್ಷ ಹುದ್ದೆಗೆ ಬಂಗಾ ಆಯ್ಕೆಯಾಗಿದ್ದು, ಈ ಹುದ್ದೆ ಅಲಂಕರಿಸಿದ ಪ್ರಥಮ ಅನಿವಾಸಿ ಭಾರತೀಯ (NRI) ಎನಿಸಿಕೊಂಡಿದ್ದಾರೆ. ಟ್ರಂಪ್ ಆಡಳಿತದಲ್ಲಿ ನೇಮಕಗೊಂಡ ಹಾಲಿ ವಿಶ್ವಬ್ಯಾಂಕ್‌ ಅಧ್ಯಕ್ಷ ಡೇವಿಡ್ ಮಲ್ಪಾಸ್ (David Malpass) ಅವರ ಅವಧಿ ಜೂನ್‌ 2ಕ್ಕೆ ಮುಕ್ತಾಯವಾಗಲಿದೆ.

ಅಜಯ್ ಬಾಂಗಾ ಅವರು, ಮಹಾರಾಷ್ಟ್ರದ ಪುಣೆಯಲ್ಲಿ 1959ರ ನವೆಂಬರ್ 10 ರಂದು ಜನಿಸಿದ್ದರು. ಅವರ ತಂದೆ ಹರ್ಭಜನ್ ಸಿಂಗ್ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದರು. ದೆಹಲಿಯ ಸೇಂಟ್‌ ಸ್ಟೀಫನ್ಸ್‌ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಪದವಿ ಪಡೆದ ಅಜಯ್ ಬಾಂಗಾ, ಅಹಮದಾಬಾದ್‌ನ ಐಐಎಂನಲ್ಲಿ ಎಂಬಿಎ ಓದಿದ್ದಾರೆ. ಶಿಕ್ಷಣ ಮುಗಿದ ನಂತರ, ನೆಸ್ಲೆಇಂಡಿಯಾ ಹಾಗೂ ಸಿಟಿಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸಿದ್ದರು. 1996ರಲ್ಲಿ ಅಮೆರಿಕಕ್ಕೆ ತೆರಳಿ ಪೆಪ್ಸಿಕೋ ಕಂಪನಿಯಲ್ಲಿ 13 ವರ್ಷ ಸೇವೆ ಸಲ್ಲಿಸಿದ್ದರು. 2009ರಲ್ಲಿ ಅಧ್ಯಕ್ಷರಾಗಿ ಮಾಸ್ಟರ್‌ ಕಾರ್ಡ್‌ ಕಂಪನಿ ಸೇರಿ ನಂತರ ಅದರ ಸಿಇಓ ಆಗಿದ್ದರು. ಇವರಿಗೆ 2016ರಲ್ಲಿ ಮೋದಿ ನೇತೃತ್ವದ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಬಂಗಾ ಅವರು ಸತತ 12 ವರ್ಷಗಳ ಕಾಲ ಮಾಸ್ಟರ್ ಕಾರ್ಡ್‍ನಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸಿ 2021ನೇ ಡಿಸೆಂಬರ್‌ನಲ್ಲಿ ಹುದ್ದೆಯಿಂದ ಕೆಳಗಿಳಿದಿದ್ದರು. ಅಮೆರಿಕ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು