Manipur : ಮಣಿಪುರದಲ್ಲಿ ಎಸ್ಟಿ ಸ್ಥಾನಮಾನ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಯುತ್ತಿದ್ದ ಪ್ರತಿಭಟನೆಯು (Protests) ಹಿಂಸಾ ರೂಪ ಪಡೆದಿದೆ. ಹೀಗಾಗಿ 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಹಿಂಸಾರೂಪಕ್ಕೆ ಪ್ರತಿಭಟನೆ ಜಾರಿದ್ದರ ಹಿನ್ನೆಲೆಯಲ್ಲಿ ಇಡೀ ಮಣಿಪುರ (Manipur) ಹೊತ್ತಿ ಉರಿಯುತ್ತಿದೆ. ಹೀಗಾಗಿ ಸ್ಥಳಕ್ಕೆ ಸೈನ್ಯ(Army) ಹೊತ್ತಿ ಉರಿದಿದೆ. ಇಂಫಾಲ್ (Imphal), ಚುರಾಚಂದ್ಪುರ ಹಾಗೂ ಕಾಂಗ್ಪೋಕ್ಪಿಯಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಪ್ರತಿಭಟನಾಕಾರರು ಎಲ್ಲೆಂದರಲ್ಲಿ ಬೆಂಕಿ ಹಚ್ಚುತ್ತಿದ್ದಾರೆ. ಪ್ರತಿಭಟನೆ ನಿಯಂತ್ರಿಸುವ ನಿಟ್ಟಿನಲ್ಲಿ ಇಂಟರ್ ನೆಟ್ ಸೇವೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ನಿಯಂತ್ರಿಸುವ ನಿಟ್ಟಿನಲ್ಲಿ ಸೇನೆ ಹಾಗೂ ಆಸ್ಸಾಂ ರೈಫಲ್ಸ್ಗೆ ಕರೆ ನೀಡಲಾಗಿದೆ.

ಬುಡಕಟ್ಟು ಜನಾಂಗದವರಲ್ಲದ ಮೀಟೈಸ್ ಸಮುದಾಯದ ಪರಿಶಿಷ್ಟ ಪಂಗಡದ ಸ್ಥಾನಮಾನದ ಬೇಡಿಕೆ ವಿರೋಧಿಸಿ ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿದ್ದವು. ಈ ಸಂದರ್ಭದಲ್ಲಿ ಆದಿವಾಸಿಗಳು ಹಾಗೂ ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ನಡೆದಿದೆ.

