ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗುವುದು. ಹೀಗಾಗಿ ಎಲ್ಲೆಡೆ ಮದ್ಯ ಮಾರಾಟಕ್ಕೆ ಭಾರೀ ಬೇಡಿಕೆ ಬಂದಿದೆ.
ಇಂದು ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದೆ. ಹೀಗಾಗಿ ರಾಜ್ಯದಲ್ಲಿ ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್ ಆಗಲಿವೆ. ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಹಲವರು ಮದ್ಯ ಖರೀದಿಗೆ ಮುಗಿಬಿದಿದ್ದಾರೆ.