Kornersite

Crime Just In National

Neet Exam: ವಿದ್ಯಾರ್ಥಿನಿಯರ ಒಳ ಉಡುಪು ತೆಗೆಯಲು ಸೂಚನೆ!

Chennai: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ (NEET Exam) ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಯರ ಒಳಉಡುಪು ಕಳಚಿಸಿರುವ ವಿಚಾರವೊಂದು ಬೆಳಕಿಗೆ ಬಂದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಚೆನ್ನೈನ ಮೈಲಾಪುರದಲ್ಲಿ ನೀಟ್ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಹಾಲ್ ಗೆ ಪ್ರವೇಶಿಸುವ ಮೊದಲು ಅವಳ ಒಳ ಉಡುಪುಗಳನ್ನು ತೆಗೆಯುವಂತೆ ಹೇಳಲಾಗಿದ್ದು, ಸದ್ಯ ಸಾರ್ವಜನಿಕರರ ಆಕ್ರೋಶಕ್ಕೆ ಕಾರಣವಾಗಿದೆ.

ವೈದ್ಯಕೀಯ ಅಧ್ಯಯನ ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ನಡೆಯುವ ಪ್ರವೇಶ ಪರೀಕ್ಷೆ ಇದಾಗಿದ್ದು, ರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆಯಲು ವಿದ್ಯಾರ್ಥಿಗಳು ತಿಂಗಳುಗಳಿಂದಲೇ ತಯಾರಿ ನಡೆಸುತ್ತಾರೆ. ಆದರೆ ಮೈಲಾಪುರದಲ್ಲಿ ನಡೆದ ಘಟನೆಯು ಈ ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿನಿಯರು ಎದುರಿಸುತ್ತಿರುವ ತೊಂದರೆಗಳನ್ನು ಎತ್ತಿ ತೋರಿಸಿದೆ.

ಮೆಟಲ್ ಡಿಟೆಕ್ಟರ್ (Metal Detector) ಇರುವುದರಿಂದ ಪರೀಕ್ಷಾ ಹಾಲ್‍ಗೆ ಪ್ರವೇಶಿಸುವ ಮುನ್ನ ತನ್ನ ಬ್ರಾ ಹಾಗೂ ನಿಕ್ಕರ್ ತೆಗೆಯುವಂತೆ ವಿದ್ಯಾರ್ಥಿನಿಗೆ ಹೇಳಲಾಗಿದೆ ಎಂದು ಯುವತಿಯ ತಂದೆಯು ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ, ಈ ಸಂಗತಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ