Kornersite

Bengaluru Just In Karnataka Politics State

Aravinda Bellada: ಅಭಿಮಾನಿ ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ತಲೆ ಮೇಲೆ ಇಟ್ಟುಕೊಂಡ ಶಾಸಕ!

Dharwad : ಅಭಿಮಾನಿಯೊಬ್ಬರು ನೀಡಿದ್ದ ಪಾದರಕ್ಷೆಯನ್ನು ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ್ ಬೆಲ್ಲದ್ ಅವರು ಕಣ್ಣಿಗೆ ಒತ್ತಿಕೊಂಡು ತಮ್ಮ ತಲೆಯ ಮೇಲೆ ಇಟ್ಟುಕೊಂಡಿದ್ದಾರೆ.

ಬೆಲ್ಲದ್ ನಿವಾಸದಲ್ಲಿ ಸಮ್ಗರ್ (ಚಮ್ಮಾರ) ಸಮುದಾಯದ ನಿಯೋಗವು ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ಕಣ್ಣಿಗೆ ಒತ್ತಿಕೊಂಡು ತಲೆ ಮೇಲೆ ಇಟ್ಟುಕೊಂಡಿದ್ದಾರೆ. ಬೆಲ್ಲದ್ ಅವರ ಈ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಲಯಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಅವರನ್ನು ಹೊಗಳಿದರೆ ಇನ್ನು ಕೆಲವರು ಇದೊಂದು ರಾಜಕೀಯ ಗಿಮಿಕ್ ಎಂದಿದ್ದಾರೆ.

ಉಡುಗೊರೆಯನ್ನು ಗೌರವಿಸಬೇಕು ಆದರೆ ಅದನ್ನು ಮುಚ್ಚಿದ ಬಾಗಿಲುಗಳಲ್ಲಿ ಮಾಡಬಹುದಿತ್ತು. ಅವರು ಮತದಾರರನ್ನು ಆಕರ್ಷಿಸಲು ಮಾಡಿರುವ ಗಿಮಿಕ್ ಆಗಿದೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಪ್ರಚಾರಕ್ಕಾಗಿ ಇಂತಹ ಕಾರ್ಯಗಳ ಅವಶ್ಯಕತೆ ಇಲ್ಲ ಎಂದ ಹಲವರು ಹೇಳಿದ್ದಾರೆ.

ನಾನು ರಾಜಕೀಯವಾಗಿ, ಆರ್ಥಿಕವಾಗಿ, ಕೌಶಲ್ಯ ಅಭಿವೃದ್ಧಿ ಕೋರ್ಸ್‌ಗಳು ಮತ್ತು ಅವರಿಗಾಗಿ ಆಡಿಟೋರಿಯಂಗಳನ್ನು ನಿರ್ಮಿಸುವುದು ಸೇರಿದಂತೆ ಅನೇಕ ರೀತಿಯಲ್ಲಿ ಸಮುದಾಯಕ್ಕೆ ಸಹಾಯ ಮಾಡಿದ್ದೇನೆ. ಇದರಿಂದಾಗಿ ನಾನು ಮಾಡಿದ ಎಲ್ಲಾ ಕೆಲಸಕ್ಕೂ ಧನ್ಯವಾದ ಹೇಳಿದರು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು