ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಕನ್ನಡದಲ್ಲಿ ಟ್ವಿಟ್ ಮಾಡಿದ್ದಾರೆ. ಟ್ವಿಟ್ ಮಾಡುವ ಮೂಲಕ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕನ್ನಡದಲ್ಲಿ ಟ್ವಿಟ್ ಮಾಡಿರುವ ನರೇಂದ್ರ ಮೋದಿ, “ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕುವಂತೆ ಹಾಗೂ ಪ್ರಜಾಪ್ರಭುತ್ವದ ಹಬ್ಬವನ್ನು ಸಮೃದ್ದಗೊಳಿಸುವಂತೆ ಒತ್ತಾಯಿಸುವೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 5,31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71, 558 ಯುವ ಮತದಾರರು ಇದ್ದಾರೆ.