ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election) ಮತ ಏಣಿಕೆ ರಾಜ್ಯದಲ್ಲಿ ಆರಂಭವಾಗಿದ್ದು, ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಡೋಲು ಬಾರಿಸಿ ಸಂಭ್ರಮಿಸಲಾಯಿತು.
2023ರ ಕರ್ನಾಟಕ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗುತ್ತಲೇ ದೆಹಲಿಯ (New Delhi) ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ.
ರಾಜ್ಯದಲ್ಲಿ ಮೇ 9ರಂದು ಚುನಾವಣೆ ನಡೆದಿತ್ತು. ಈಗಾಗಲೇ ಮತ ಏಣಿಕೆ ಆರಂಭವಾಗಿದೆ. ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಕಾಂಗ್ರೆಸ್ (Congress) ಕಚೇರಿಯಲ್ಲೂ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.