ಬಳ್ಳಾರಿ : ಮಾಜಿ ಸಚಿವ ಬಿ. ಶ್ರೀರಾಮುಲುಗೆ ಮುಖಭಂಗವಾಗಿದೆ. ಬಳ್ಳಾರಿ ಗ್ರಾಮೀಣ ಭಾಗದ ಜನರು ಶ್ರೀರಾಮುಲು ಅವರಿಗೆ ಸೋಲುನಿಸಿದ್ದಾರೆ.
ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀರಾಮುಲು (Sriramulu) ಬಳ್ಳಾರಿ (Ballary) ಗ್ರಾಮೀಣದಲ್ಲಿ ಹೀನಾಯ ಸೋಲನುಭವಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ಸ್ಪರ್ಧಿಸಿ, ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ಮುಂಚೂಣಿ ನಾಯಕ ಬಿ. ಶ್ರೀರಾಮುಲು ಈ ಬಾರಿ ಹೀನಾಯ ಸೋಲು ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ನ (Congress) ಹಾಲಿ ಶಾಸಕ ನಾಗೇಂದ್ರಗೆ ಭರ್ಜರಿ ಜಯ ಸಿಕ್ಕಿದೆ.
ಈ ಬಾರಿ ಕ್ಷೇತ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕ್ಷೇತ್ರದಲ್ಲಿ ಒಟ್ಟು 1,16,096 ಪುರುಷ ಮತದಾರರು, 1,22,181 ಮಹಿಳೆಯರು, 49 ಇತರ ಮತದಾರರು ಸೇರಿ ಒಟ್ಟು 2,38,326 ಮತದಾರರು ಮತದಾನದ ಹಕ್ಕು ಹೊಂದಿದ್ದರು. ಮೇ 10ರಂದು ನಡೆದಿದ್ದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.76.09ರಷ್ಟು ಸಾಧಾರಣ ಮತದಾನ ನಡೆದಿತ್ತು.