Kornersite

Bengaluru Just In Karnataka Politics State

Congress: ಕಗ್ಗಂಟಾಗಿಯೇ ಉಳಿಯುತ್ತಿರುವ ಸಿಎಂ ಆಯ್ಕೆ ವಿಚಾರ; ಡಿಕೆಶಿ, ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಈಗ ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಾಗಲೂರು ಬಳಿಯ ಫಾರ್ಮ್ ಹೌಸ್ ನಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಬಲಿಗರು ಸಭೆಯಲ್ಲಿ ಮಾತನಾಡಿದ ಅವರು, ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಇದರ ಮಧ್ಯೆಯೇ ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಸಿ ಸಭೆ ನಡೆಸಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಅವರು ಡಾ.ಯತೀಂದ್ರ, ಜಮೀರ್ ಅಹ್ಮದ್ ರೊಂದಿಗೆ ದೆಹಲಿಗೆ ತೆರಳಿದ್ದಾರೆ.

ಭಾನುವಾರ ರಾತ್ರಿ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಶಕಾಂಗ ಪಕ್ಷದ ಸಭೆಯು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿತ್ತು. ಎಐಸಿಸಿ ವೀಕ್ಷಕರು ಶಾಸಕರ ವೈಯಕ್ತಿಕ ಮೌಖಿಕ ಅಭಿಪ್ರಾಯ ಸಂಗ್ರಹಿಸಿದ್ದು, ಅದನ್ನು ಹೈಕಮಾಂಡ್ಗೆ ಕಳಿಹಿಸಿಕೊಟ್ಟಿದ್ದರು. ಮೂವರು ವೀಕ್ಷಕ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ಸಭೆಯಲ್ಲಿ ಭಾಗವಹಿಸಿದ್ದರು. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಉಳಿದ ವಿಷಯವನ್ನು ಹೈಕಮಾಂಡ್ ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು