ಶಿವಮೊಗ್ಗ : ವಿಧಾನಸಭೆ ಚುನಾವಣೆ ಫಲಿತಾಂಶ (Karnataka Election Results)ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ.
ನಗರದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದು ಆರೋಪಿಸಿದ್ದಾರೆ.
ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರ ನಡುವೆ ಜಾತಿ ಲಾಬಿ ನಡೆಯುತ್ತಿದೆ. ಡಿಕೆಶಿ ಪರ ಒಕ್ಕಲಿಗರು ಮತ್ತು ಸಿದ್ದರಾಮಯ್ಯನವರ ಪರ ಕುರುಬರ ಲಾಬಿ ಮಾಡುತ್ತಿದ್ದಾರೆ. ಇದನ್ನು ಗಮನಿಸಿದರೆ ಜಾತಿವಾದಿಗಳು ಇವರು ಎನ್ನಲಾಗುತ್ತಿದೆ. ಬಿಜೆಪಿಗೆ ಇವರು ಕೋಮುವಾದಿಗಳು ಎನ್ನುತ್ತಿದ್ದರು. ಈಗ ಅವರು ಮಾಡುತ್ತಿರುವುದು ಏನು? ಎಂದು ಪ್ರಶ್ನಿಸಿದ್ದಾರೆ.