Kornersite

Bengaluru Just In Karnataka State

Hassan: ಸಾರಿಗೆ ಬಸ್ ನಲ್ಲಿಯೇ ಹೆರಿಗೆ! ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಮೆಚ್ಚುಗೆ!

ಹಾಸನ : ಸಾರಿಗೆ ಬಸ್ ನಲ್ಲಿಯೇ ಮಹಿಳೆಯೊಬ್ಬರಿಗೆ ಹೆರಿಗೆಯಾಗಿರುವ ಘಟನೆ ನಡೆದಿದೆ.

ಅಲ್ಲದೇ, ಆ ಬಸ್ ನಲ್ಲಿಯೇ ಮಹಿಳಾ ಕಂಡಕ್ಟರೊಬ್ಬರು (Conductor) ಬಸ್‌ನಲ್ಲಿಯೇ ಗರ್ಭಿಣಿಗೆ (Pregnant) ಹೆರಿಗೆ ಮಾಡಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ಡಿಪೋದ ಕೆಎ 18 ಎಫ್ 0865 ಸಾರಿಗೆ ಬಸ್ (KSRTC Bus) ಬೆಂಗಳೂರಿನಿಂದ (Bengaluru) ಚಿಕ್ಕಮಗಳೂರಿಗೆ (Chikkamagaluru) ಹೋಗುತ್ತಿತ್ತು. ಬಸ್‌ ನಲ್ಲಿ (BUS) ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಮಧ್ಯಾಹ್ನ 1.25ರ ಸುಮಾರಿಗೆ ಹಾಸನದ ಉದಯಪುರ ಕೃಷಿ ಕಾಲೇಜು ಹತ್ತಿರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ, ಹತ್ತಿರದಲ್ಲಿ ಯಾವುದೇ ಆಸ್ಪತ್ರೆ ಇಲ್ಲದಿರುವುದರಿಂದಾಗಿ ಮಹಿಳಾ ಕಂಡಕ್ಟರ್ ಎಸ್ ವಸಂತಮ್ಮ ಬಸ್ ನಿಲ್ಲಿಸಿ, ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ಕೆಳಗಿಳಿಸಿ, ಹೆರಿಗೆ ಮಾಡಿಸಿದ್ದಾರೆ.

ಆನಂತರ ಮಹಿಳೆಯನ್ನು ಶಾಂತಗ್ರಾಮ ಆಸ್ಪತ್ರೆಗೆ ದಾಖಲಿಸಿ, ಅಗತ್ಯ ಚಿಕಿತ್ಸೆ ನೀಡಲಾಯಿತು. ಮಗು ಮತ್ತು ಮಹಿಳೆ ಆರೋಗ್ಯವಾಗಿದ್ದಾರೆ. ನಂತರ, ಬಸ್ ಸಿಬ್ಬಂದಿಗೆ ಮಹಿಳೆಯು ಆರ್ಥಿಕವಾಗಿ ಕಷ್ಟದಲ್ಲಿದ್ದಾಳೆಂದು ತಿಳಿದಿದ್ದು, ಪ್ರಯಾಣಿಕರಿಂದ 1,500 ರೂ. ಸಂಗ್ರಹಿಸಿ ನೀಡಿದ್ದಾರೆ. ಸದ್ಯ ಮಹಿಳಾ ಕಂಡೆಕ್ಟರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ