Kornersite

Bengaluru Just In Karnataka Politics State

ನಾಳೆ 3.30ಕ್ಕೆ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟ ಪ್ರಮಾಣ ವಚನ!

ಬೆಂಗಳೂರು : ಸಿಎಂ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ (Delhi) ರಾಹುಲ್ ಗಾಂಧಿ (Rahul Gandhi) ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಸಿದ್ದರಾಮಯ್ಯ (Siddaramaiah) ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮನೆಯ ಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ವರುಣಾ (Varuna) ಕ್ಷೇತ್ರದಲ್ಲೂ ಸಹ ಸಂಭ್ರಮ ಮನೆ ಮಾಡಿದೆ.

ಸಿದ್ದರಾಮಯ್ಯ ಸಿಎಂ ಆಗಲು ಹೈಕಮಾಂಡ್ (High Command) ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಕರೆಂಟ್ ಫ್ರೀ, ಬಸ್‌ ನಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ, ಗೃಹಿಣಿಯರಿಗೆ 2 ಸಾವಿರ ರೂ. ದುಡ್ಡು ಎಂದು ಅನೇಕ ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿ ಸಂಭ್ರಮಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ (D.K.Shivakumar) ಉಪಮುಖ್ಯಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲು ರಾಹುಲ್ ನಿವಾಸಕ್ಕೆ ಆಗಮಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು