Bangalore : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲಿಯೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ.
ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಇದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬೆಂಬಲಿತ ಬೇರೆ ರಾಜ್ಯದ ಸಿಎಂಗಳು ಆಗಮಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು, 2013 ರಲ್ಲಿಯೂ ಕಂಠೀರವ ಸ್ಟೇಡಿಯಂನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಹಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.