Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress)135 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಸಿಎಂ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಉಭಯ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾತೆ.
ಈಗ ಸಿದ್ದರಾಮಯ್ಯ ವಿರುದ್ಧ ಡಿ.ಕೆ. ಶಿವಕುಮಾರ್ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ. ನಾನು ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ, ಅಧಿಕಾರಕ್ಕೆ ತಂದಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಜತೆ ಬಿಗಿಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್, ನನಗೆ ಸಿಎಂ ಆಗಲು ಅವಕಾಶ ನೀಡದಿದ್ದರೆ ನೀವೇ ಆಗಿ. ನೀವಾದರೆ ನನ್ನದು ಸಂಪೂರ್ಣ ಸಹಕಾರ ಇದೆ ಎಂದು ಹೇಳಿದ್ದಾರೆ.
2018ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೇವು. ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಸೋತಿದ್ದೆವು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿದ್ದೇನೆ. ಒಂದೋ ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ. ರಾಜ್ಯದಲ್ಲಿ ದಲಿತ ಸಿಎಂ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ದಲಿತರು ಸಿಎಂ ಆದರೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಖರ್ಗೆ ಬಳಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.