Kornersite

Bengaluru Just In Karnataka Politics State

ಸಿದ್ದರಾಮಯ್ಯರ ಮಾಜಿ ಶಿಷ್ಯರ ನಡುವೆ ಫೈಟ್; ಸುಧಾಕರ್ ಆರೋಪಕ್ಕೆ ಎಂಟಿಬಿ ಗರಂ!

Bangalore : ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ. ಇದರ ಮಧ್ಯೆ ಅವರ ಮೇಲೆ ಅವರ ಒಂದು ಕಾಲದ ಶಿಷ್ಯ ಡಾ. ಕೆ.ಸುಧಾಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಅವರ ಈ ಹೇಳಿಕೆಗೆ ಅವರ ಪಕ್ಷದಲ್ಲಿನ ನಾಯಕರಿಂದಲೇ ವಾಕ್ಸಮರ ನಡೆದಿದೆ.

ಸಿದ್ದರಾಮಯ್ಯ (Siddaramaiah) ಪರ ಎಂಟಿಬಿ ನಾಗರಾಜ್ (MTB Nagaraj) ಬ್ಯಾಟಿಂಗ್ ಮಾಡಿದ್ದಾರೆ. ಬಿಜೆಪಿಗೆ ಸಿದ್ದರಾಮಯ್ಯ ಪ್ರೇರಣೆ ಎಂಬ ಡಾ.ಕೆ.ಸುಧಾಕರ್ (K Sudhakar), ಎಸ್.ಟಿ. ಸೋಮಶೇಖರ್ (ST Somashekhar) ಟ್ವೀಟ್ ಹಿನ್ನೆಲೆಯಲ್ಲಿ ಎಂಟಿಬಿ ಅವರು ಸುಧಾಕರ್ ಗೆ ಕೌಂಟರ್ ನೀಡಿದ್ದಾರೆ. ಸುಧಾಕರ್ ಟ್ವೀಟ್ ಗೆ ಎಂಟಿಬಿ ವಿರೋಧ ವ್ಯಕ್ತಪಡಿಸಿದ್ದು, ಸುಧಾಕರ್ ಸುಳ್ಳು ಹೇಳ್ತಿದ್ದಾರೆಂದು ಬಹಿರಂಗವಾಗಿಯೇ ಆರೋಪ ಮಾಡಿದ್ದಾರೆ.

ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಮನೆ ದೇವರ ಮೇಲೆ ಆಣೆ ಮಾಡಿ ಸುಧಾಕರ್ ಈ ಮಾತು ಹೇಳಲಿ ಎಂದು ಎಂಟಿಬಿ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿದ್ದೇನೆ. ಈ ವೇಳೆ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು. ಇದು ಸತ್ಯ. ಆದರೆ ಮಾಜಿ ಸಚಿವ ಸುಧಾಕರ್ ಇಂದು ಸಿದ್ದರಾಮಯ್ಯ ಬಗ್ಗೆ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು