Bhopal : ಟ್ರಾಕ್ಟರ್ ಟ್ರಾಲಿಗೆ (Tractor Trolley) ಸ್ಲೀಪರ್ ಬಸ್ (Sleeper Bus) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. (Madhya Pradesh) ನಡೆದಿದೆ.

ಘಟನೆಯಲ್ಲಿ 15ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಮಧ್ಯ ಪ್ರದೇಶದ ಶಾಜಾಪುರದಲ್ಲಿ (Shajapur) ಈ ಘಟನೆ ಬೆಳಕಿಗೆ ಬಂದಿದ್ದು, ಸ್ಲೀಪರ್ ಬಸ್ ಅಹಮದಾಬಾದ್‌ಗೆ (Ahamedabad) ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಬಸ್ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತರಲು ಹರಸಾಹಸ ಪಟ್ಟಿದ್ದು, ಗ್ರಾಮಸ್ಥರು ಪೊಲೀಸರಿಗೆ ಸಾಥ್ ನೀಡಿದ್ದಾರೆ.
ಳಕ್ಕೆ ತುರ್ತು ಚಿಕಿತ್ಸಾ ದಳ ಆಗಮಿಸಿ ಗಾಯಾಳುಗಳಿಗೆ ನೆರವು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಜ್ಜಯಿನಿಯ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.