NewDelhi : ಹೈಕಮಾಂಡ್ ನಿರ್ಧಾರ ನನಗೆ ಬೇಸರ ತಂದಿದೆ. ಆದರೆ, ಮುಂದೆ ಸಾಕಬೇಕಾದ ಹಾದಿ ಸಾಕಷ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಿದ ನಂತರ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮಧ್ಯೆ ಗುದ್ದಾಟ ನಡೆದಿತ್ತು. ಆದರೆ, ಎಐಸಿಸಿ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಘೋಷಿಸಿ, ಡಿಕೆಶಿಗೆ ಡಿಸಿಎಂ ಹುದ್ದೆ ನೀಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಡಿ.ಕೆ. ಸುರೇಶ್, ರಾಜ್ಯದ ಹಿತದೃಷ್ಟಿಯಿಂದ ನಾವು ಬದ್ಧತೆ ಪ್ರದರ್ಶಿಸಿದ್ದೇವೆ. ಹೀಗಾಗಿಯೇ ಡಿಕೆಶಿ ಹೈಕಮಾಂಡ್ ನಿರ್ಧಾರ ಒಪ್ಪಿಕೊಂಡಿದ್ದಾರೆ. ಮುಂದೆ ನೋಡೋಣ ಎಂದು ಹೇಳಿದ್ದಾರೆ. ಅಧಿಕೃತವಾಗಿ ಸಿದ್ದರಾಮಯ್ಯ ಸಿಎಂ ಎಂಬುವುದನ್ನು ಹೈಕಮಾಂಡ್ ಈಗಾಗಲೇ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಈ ಕುರಿತು ಔಪಚಾರಿಕ ಘೋಷಣೆಯನ್ನು ಮಾಡಲಾಗುತ್ತದೆ. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.