Kornersite

Crime Just In Karnataka State

ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ!

Vijyapur : ಪಾಪಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ.
ಗಲ್ಲು ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದ. ಹೀಗಾಗಿ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

2018 ಜನೇವರಿ 27 ರಂದು ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಕಟನೂರು ಗ್ರಾಮದಲ್ಲಿ ಮೂತ್ರ ವಿಸರ್ಜನೆ ಮಾಡುವ ವಿಷಯದಲ್ಲಿ ಶಮಶಾದ್ ಮಕಾನದಾರ ಹಾಗೂ ಅಕ್ಬರಬಾಷಾ ಬಾಗವಾನ ಮಧ್ಯೆ ಜಗಳ ನಡೆದಿತ್ತು. ಜಗಳವಾದ ನಂತರ ಸಂಜೆ ಶಮಶಾದ ಅಕ್ಬರ್ ಮಕಾನದಾರ ತನ್ನ ಮಗಳು ಕೌಸರಬಿ ಜೊತೆಗೆ ಮನೆಯ ಮುಂದೆ ಮಗಳೊಂದಿಗೆ ಕುಳಿತಾಗ ಪಕ್ಕದ ಮನೆಯ ನಿವಾಸಿ ಅಕ್ಬರಬಾಷಾ ಬಾಗವಾನ ಏಕಾಏಕಿ ಆಗಮಿಸಿ ಶಮಶಾದ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಶಮಶಾದ, 2018 ಫೆ.15 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

ಘಟನೆ ಕುರಿತು ಗಾಯಾಳು ಶಮಶಾದ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿಜಯಪುರ ಜಿಲ್ಲಾ 1ನೇ ಅಧಿಕ ಜಿಲ್ಲಾಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸತೀಶ ಎಲ್.ಪಿ. ಆರೋಪಿ ಅಕ್ಬರಸಾಬ್ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಪ್ರತ್ಯೇಕವಾಗಿ 2 ವರ್ಷ ಜೈಲು ಶಿಕ್ಷೆ ಹಾಗೂ 9 ಸಾವಿರ ರೂ. ದಂಡ ವಿಧಿಸಿದ್ದಾರೆ. ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಕೂಡ ಆದೇಶಿಸಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ