Kornersite

Bengaluru Just In Karnataka Politics State

KJ George: ಹಿರಿಯ ನಾಯಕ ಕೆಜೆ ಜಾರ್ಜ್ ಗೆ ಒಲಿದು ಬಂದ ಸಚಿವ ಸ್ಥಾನ!

ಕ್ರಿಶ್ಚಿಯನ್ ಸಮುದಾಯದ ಕೆಜೆ ಜಾರ್ಜ್ (KJ George) ಕಾಂಗ್ರೆಸ್ ನಲ್ಲಿ ಹಿರಿಯ ರಾಜಕಾರಣಿ.. ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ 6ನೇ ಬಾರಿ ಆಯ್ಕೆಯಾಗಿದ್ದಾರೆ. ಕೆಲಚಂದ್ರ ಜೋಸೆಫ್ ಜಾರ್ಜ್. ಕೆಜೆ ಜಾರ್ಜ್ ಅವರು 24 ಆಗಸ್ಟ್ 1949 ರಂದು ಈಗಿನ ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಕೆಲಚಂದ್ರ ಚಾಕೋ ಜೋಸೆಫ್ ಮತ್ತು ಮರಿಯಮ್ಮ ಜೋಸೆಫ್ ದಂಪತಿಗೆ ಜನಿಸಿದವರು. ಈ ಕುಟುಂಬ1960 ರ ದಶಕದಲ್ಲಿ ಕರ್ನಾಟಕದ ಕೊಡಗು ಜಿಲ್ಲೆಗೆ ಸ್ಥಳಾಂತರಗೊಂಡು ನಂತರ ಬೆಂಗಳೂರಿಗೆ ಬಂದಿತು.

ಕೆ.ಜೆ.ಜಾರ್ಜ್ ಅವರು 1968ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು. 1969ರಲ್ಲಿ ಗೋಣಿಕೊಪ್ಪಲು ಟೌನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 1985 ರಲ್ಲಿ ಹಿಂದಿನ ಭಾರತೀನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 1985 ರಿಂದ 1989 ರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅಡಿಯಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಕ್ಯಾಬಿನೆಟ್ ಸಚಿವರಾಗಿದ್ದರು. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ 6ನೇ ಬಾರಿ ಗೆದ್ದ ಇವರು ಸಿದ್ದರಾಮಯ್ಯ ಸಂಪುಟದಲ್ಲಿ ಮೊತ್ತಮ್ಮೆ ಸ್ಥಾನ ಪಡೆದಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು