Kornersite

Crime Just In National

ಮತ್ತೆ ಹೊತ್ತಿ ಉರಿಯುತ್ತಿರುವ ಮಣಿಪುರ; ಹಲವು ಮನೆಗಳಿಗೆ ಬೆಂಕಿ!

Imphal : ಮಣಿಪುರ(Manipur)ದಲ್ಲಿ ಮತ್ತೆ ಘರ್ಷಣೆ ನಡೆದಿದ್ದು, ರಾಜಧಾನಿ ಇಂಫಾಲದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಮಣಿಪುರದಲ್ಲಿ ಹಿಂಸಾಚಾರ ಮೇ 3 ರಿಂದ ಪ್ರಾರಂಭವಾಗಿ ಇಂದಿಗೂ ಜೀವಂತವಾಗಿದೆ. ಹಿಂಸಾಚಾರದಲ್ಲಿ 70ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 26 ಸಾವಿರಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿತ್ತು. ಈಗ ಮೈಟೀಸ್ (Meiteis) ಹಾಗೂ ಕುಕಿ ಜನಾಂಗದ ನಡುವೆ ಅಲ್ಲಿ ಮತ್ತೆ ಘರ್ಷಣೆ ಆರಂಭವಾಗಿದೆ. ರಾಜಧಾನಿ ಇಂಫಾಲನಲ್ಲಿ (Imphal) ಕರ್ಫ್ಯೂ ಜಾರಿಗೊಳಿಸಲಾಗಿದೆ. ಮನೆಗಳಿಗೆ ಬೆಂಕಿ ಹಚ್ಚಿದ ಮೂವರು ಆರೋಪಿಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಲ್ಲದೇ, ಇಂಫಾಲದಲ್ಲಿ ಮೇ 26ರ ವರೆಗೆ ಇಂಟರ್ನೆಟ್ ಬಂದ್ ಮಾಡಲಾಗಿದೆ. ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ಎರಡು ಸಮುದಾಯಗಳ ನಡುವಿನ ಉದ್ವಿಗ್ನತೆಯ ಕುರಿತು ಬರುತ್ತಲೇ ಇವೆ. ಮೈಟೈಸ್ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (Manipur High Court) ಸೂಚಿಸಿತ್ತು. ನಂತರ ಪ್ರತಿಭಟನೆ ನಡೆದಿತ್ತು. ಸದ್ಯ ಆ ಘರ್ಷಣೆ ನಡೆಯುತ್ತಿಲ್ಲ. ಈಗ ನಡೆದಿರುವ ಘಟನೆ ಅರಣ್ಯ ಸಂರಕ್ಷಣೆ ಮತ್ತು ಗಸಗಸೆ ತೆರವುಗೊಳಿಸುವ ಸರ್ಕಾರದ ನೀತಿಗೆ ವಿರುದ್ಧವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ