Kornersite

Bengaluru Crime Just In Karnataka State

Crime News: ಧಾರವಾಡದಲ್ಲಿ ಜೋಡಿ ಕೊಲೆ; ಬೆಚ್ಚಿ ಬಿದ್ದ ಜನರು!

ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ನಗರದ ಕಮಲಾಪುರ ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿ, ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಮಹಮ್ಮದ್ ಅವರ ಅವರ ಮನೆಯಲ್ಲಿದ್ದ ಮತ್ತೋರ್ವ ವ್ಯಕ್ತಿಯ ಮೇಲೆಯೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಓಡಿ ಹೋಗಿದ್ದು, ಮನೆಯಿಂದ ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ಆತ ಕೂಡ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತನ ಹೆಸರು ಇದುವರೆಗೂ ತಿಳಿದು ಬಂದಿಲ್ಲ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಸದ್ಯದಲ್ಲಿಯೇ ಬಂಧಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಾರಕಾಸ್ತ್ರಗಳು ಪತ್ತೆಯಾಗಿವೆ. ಆರೋಪಿಗಳ ಪತ್ತೆಗೆ ತನಿಖಾ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ