Kornersite

Bengaluru Just In Karnataka Politics State

Cabinet: ಹಿರಿಯರಿಗೆ ಸಿಗದ ಸಚಿವ ಸ್ಥಾನ; ರಾಜೀನಾಮೆಗೆ ಮುಂದಾದ ಬಿ.ಕೆ. ಹರಿಪ್ರಸಾದ್

Bangalore: ಸಿದ್ದರಾಮಯ್ಯ (Siddarmaiah) ಸರ್ಕಾರದ ಸಂಪುಟ ಸೇರಲು ಹಲವಾರು ಆಕಾಂಕ್ಷಿಗಳು ಪ್ರಯತ್ನಿಸಿದ್ದರು. ಕೊನೆಗೂ ಸಂಪುಟ ರಚನೆಯಾಗಿದ್ದು, ಹಲವು ಹಿರಿಯರಿಗೆ ಅವಕಾಶ ನೀಡಿಲ್ಲ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್(BK Hariprasad) ಮುನಿಸಿಕೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್, 16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ‌ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಕೊನೆ ಕ್ಷಣದಲ್ಲಿ ಬದಲಾಗಿದ್ದರಿಂದ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಪಕ್ಷದ ಕೆಲವರ ನಡೆಯಿಂದ ಅಸಮಾಧಾನಗೊಂಡು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬಿಕೆ ಹರಿಪ್ರಸಾದ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುಸಿಕೊಂಡಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಡಿಕೆ ಶಿವಕುಮಾರ್ ಸಹ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದರೆ, ಇದಕ್ಕೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹರಿಪ್ರಸಾದ್ ಅವರಿಗೆ ಮಂತ್ರಿಭಾಗ್ಯ ಸಿಕ್ಕಿಲ್ಲ ಎನ್ನಲಾಗಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು