Kornersite

Just In Sports

IPL 2023: 10ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಚೆನ್ನೈ; ನಾಳೆ ಗೆದ್ದರೆ ದಾಖಲೆ!

IPL 2023 CSK vs GT: ಐಪಿಎಲ್ನ 16ನೇ ಆವೃತ್ತಿಗೆ ನಾಳೆ ತೆರೆ ಬೀಳಲಿದೆ. ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗಾಗಿ ಫೈಟ್ ನಡೆಸಲು ಸಿದ್ಧವಾಗಿವೆ.

ನಾಳೆಯ ಪಂದ್ಯವನ್ನು ಚೆನ್ನೈ ಗೆದ್ದರೆ ಐದನೇ ಬಾರಿಗೆ ಚಾಂಪಿಯನ್ ಆಗಲಿದೆ. ಒಂದು ವೇಳೆ ಗುಜರಾತ್ ಗೆದ್ದರೆ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆ. ಇಲ್ಲಿ ಗುಜರಾತ್ ಟೈಟಾನ್ಸ್ ಕೇವಲ 2 ಸೀಸನ್ಗಳ ಮೂಲಕ 2 ಬಾರಿ ಫೈನಲ್ಗೇರಿದರೆ, ಸಿಎಸ್ಕೆ ತಂಡವು 14 ಸೀಸನ್ಗಳ ಮೂಲಕ 10ನೇ ಬಾರಿ ಫೈನಲ್ ಪ್ರವೇಶಿಸಿದೆ. ಇಲ್ಲಿಯವರೆಗೆ 9 ಬಾರಿ ಫೈನಲ್ ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೈನಲ್ ಪಂದ್ಯದಲ್ಲಿ ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು. ಹತ್ತು ಫೈನಲ್ಗಳಲ್ಲಿ ಧೋನಿ ಪಡೆ 5 ಬಾರಿ ಸೋಲನುಭವಿಸಿದೆ.

2008 ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ರನ್ನರ್ ಅಪ್ ಪಟ್ಟ ಅಲಂಕರಿಸಿತ್ತು. 2010 ರಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು.
2011 ರಲ್ಲಿ ಆರ್ಸಿಬಿಗೆ ಸೋಲುಣಿಸಿ ಚಾಂಪಿಯನ್ ಆದರೆ, 2012 ರ ಫೈನಲ್ನಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತು. 2013 ರಲ್ಲಿ ಮತ್ತೆ ಚೆನ್ನೈ ಸೋಲಿಸಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. 2015 ರಲ್ಲಿ ಮತ್ತೆ ಫೈನಲ್ ಪ್ರವೇಶಿಸಿದ ಸಿಎಸ್ಕೆ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತು. 2018 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ಸಿಎಸ್ಕೆ ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2019 ರ ಫೈನಲ್ ನಲ್ಲಿ ಸಿಎಸ್ ಕೆಗೆ ಮತ್ತೆ ಮುಂಬಯಿ ತಂಡ ಸೋಲುಣಿಸಿತು.

2021 ರಲ್ಲಿ ಮತ್ತೆ ಫೈನಲ್ಗೆ ಪ್ರವೇಶಿಸಿದ ಸಿಎಸ್ಕೆ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿತು. ಇದೀಗ 10ನೇ ಬಾರಿಗೆ ಫೈನಲ್ಗೆ ಲಗ್ಗೆಯಿಟ್ಟಿದೆ. ಈ ಬಾರಿ ಗೆದ್ದರೆ 5 ಚಾಂಪಿಯನ್ ಪಟ್ಟ ಅಲಂಕರಿಸಿದ 2ನೇ ತಂಡ ಎನಿಸಿಕೊಳ್ಳಲಿದೆ. 6 ಬಾರಿ ಫೈನಲ್ ಪ್ರವೇಶಿಸಿರುವ ಮುಂಬಯಿ 5 ಬಾರಿ ಪ್ರಶಸ್ತಿ ಗೆದ್ದು ಅಗ್ರ ಪಟ್ಟಿಯಲ್ಲಿದೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್