ದಿಸ್ಪುರ್ : ಕಾರು (Scorpio SUV) ಹಾಗೂ ಬೊಲೆರೊ ಟ್ರಕ್ (Truck) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ (Guwahati) ನಡೆದಿದೆ.
ನಗರದ ಜಲುಕಬಾರಿ ಮೇಲ್ಸೇತುವೆ ಹತ್ತಿರ ಈ ಭಯಾನಕ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಸ್ಥಳದಲ್ಲಿಯೇ 7 ಜನ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿವೆ ಎಂದು ಪೊಲೀಸರು ಹೇಳಿದ್ದಾರೆ.
ಈ ಕಾರಿನಲ್ಲಿ ಸುಮಾರು 10 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಇನ್ನುಳಿದ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ತವರೆಲ್ಲರೂ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಆಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸಂತಾಪ ಸೂಚಿಸಿದ್ದಾರೆ.