Kornersite

Bengaluru Just In Karnataka Politics State

ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನ; ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪಿದ ನಾಯಕ!

ಮಹಾರಾಷ್ಟ್ರ ರಾಜ್ಯದಲ್ಲಿನ ಏಕೈಕ ಕಾಂಗ್ರೆಸ್ ಸಂಸದ ಬಾಲು ಧನೋರ್ಕರ್ (48) ಚಿಕ್ಕ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ.

ಬಾಲು ಧನೋರ್ಕರ್ ಅವರು ಮೂತ್ರಪಿಂಡದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ನಾಗ್ಪುರ ಮೂಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲಿ ಚಿಕಿತ್ಸೆ ಫಲ ನೀಡದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಧನೋರ್ಕರ್ ಅವರು ಚಂದ್ರಾಪುರ ಜಿಲ್ಲೆಯಲ್ಲಿ ಶಿವಸೇನೆಯಲ್ಲಿ ಗುರುತಿಸಿಕೊಂಡು ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದರು. 2014ರಲ್ಲಿ ವಿಧಾನಸಬೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ಸೇರಿ, ಅದೇ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸಂಸದರ ಅಗಲಿಕೆಗೆ ರಾಜಕೀಯ ನಾಯಕರು ಕಂಬಣಿ ಮಿಡಿಯುತ್ತಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು