ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಗಳನ್ನು ಜೂನ್ 1ಕ್ಕೆ ಪರಿಷ್ಕರಿಸಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 83.50 ರೂ. ಇಳಿಕೆಯಾಗಿದೆ.
ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನ ನಡೆಯುತ್ತವೆ. ಆದರೆ, ಗೃಹ ಬಳಕೆ ಸಿಲಿಂಡರ್ ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕಳೆದ ತಿಂಗಳು, ಹೊಟೇಲ್ ಗಳು ರೆಸ್ಟೋರೆಂಟ್ ಗಳಂತಹ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಎಲ್ ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 171.5 ರೂಪಾಯಿ ಕಡಿತ ಮಾಡಲಾಗಿತ್ತು. ಜೆಟ್ ಇಂಧನ (ಎಟಿಎಫ್) ದರಗಳನ್ನು ಅಂತಾರಾಷ್ಟ್ರೀಯ ತೈಲ ಬೆಲೆಗಳನ್ನು ಮೃದುಗೊಳಿಸುವ ಮೂಲಕ ಶೇ. 2.45ರಷ್ಟು ಕಡಿಮೆ ಮಾಡಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿಯ ಬೆಲೆ 2,028 ರೂ.ನಿಂದ 1,856.5 ರೂಪಾಯಿಗೆ ಇಳಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ 14.2 ಕೆಜಿ ಸಿಲಿಂಡರ್‌ಗೆ 1,103 ರೂ.ನಲ್ಲಿ ಬದಲಾಗದೆ ಉಳಿದಿದೆ. ಎಲ್‌ಪಿಜಿ ದರಗಳನ್ನು ಮಾರ್ಚ್ 1 ರಂದು ಕೊನೆಯ ಬಾರಿಗೆ ಬದಲಾಯಿಸಲಾಗಿತ್ತು, ಆಗ ಪ್ರತಿ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳ ಮಾಡಲಾಗಿತ್ತು.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಹಿಂದಿನ ತಿಂಗಳ ಸರಾಸರಿ ಅಂತಾರಾಷ್ಟ್ರೀಯ ಬೆಲೆಗಳ ಆಧಾರದ ಮೇಲೆ ಪ್ರತಿ ತಿಂಗಳ 1 ನೇ ತಾರೀಖಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸಿವೆ.