ವ್ಯಕ್ತಿಯೊಬ್ಬ ತನಗೆ ಗಂಡು (Boy Baby) ಮಗು ಹುಟ್ಟಿದೆ ಎಂದು ತನ್ನ ಸ್ನೇಹಿತರಿಗೆ ಪಾರ್ಟಿ ಕೊಡಿಸಿದ್ದ. ಆದರೆ, ಆ ಸ್ನೇಹಿತರು ಆತನ ತಲೆ ಬುರುಡೆಯನ್ನೇ ಓಪನ್ ಮಾಡಿರುವ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ರಂಗನಾಥ್ ಎಂಬ ವ್ಯಕ್ತಿಯೇ ಗಂಡು ಮಗು ಆದ ಎಂಬ ಖುಷಿಯಲ್ಲಿ ಸ್ನೇಹಿತರಾದ ಮನೋಜ್, ಮಧುಸೂದ್, ಪ್ರಸಾದ್‍ಗೆ ಪಾರ್ಟಿ ಕೊಡಿಸಿದ್ದ. ಆದರೆ, ಈ ಪಾರ್ಟಿಯಲ್ಲಿಯೇ ಸ್ನೇಹಿತರು ಆತ ಕುಡಿಸಿದ ಮದ್ಯವನ್ನೇ ಕುಡಿದು, ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.
ಈ ಪಾರ್ಟಿಲ್ಲಿ ರಾಜಕೀಯ ಪಕ್ಷದ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಕೊಲೆಯಾದ ರಂಗನಾಥ್ ಹಾಗೂ ಸ್ನೇಹಿತರು ರಾಜಕೀಯ ಮಾತನಾಡಿದ್ದಾರೆ.
ರಂಗನಾಥ್ ಕಾಂಗ್ರೆಸ್ (Congress) ಪರ ಮಾತನಾಡುತ್ತಿದ್ದಾಗ ಸ್ನೇಹಿತರು ಬಿಜೆಪಿ (BJP) ಪರ ಮಾತನಾಡಿಕೊಂಡು ಕಿಚಾಯಿಸಿದ್ದಾರೆ. ಆಗ ರಂಗನಾಥ್ ಹಾಗೂ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಜಗಳ ತಾರಕಕ್ಕೇರಿ ಪಕ್ಕದಲ್ಲಿದ್ದ ಬಿಯರ್ ಬಾಟ್ಲಿಯಿಂದ ರಂಗನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆಯಿಂದ ತೀವ್ರ ರಕ್ತಸ್ರಾವ ಹಿನ್ನೆಲೆ ರಂಗನಾಥ್‍ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಲ್ಲೆ ಮಾಡಿಸಿಕೊಂಡ ವ್ಯಕ್ತಿ ಹಾಗೂ ಹಲ್ಲೆ ಮಾಡಿದವರು ಸ್ವಿಗ್ಗಿ ಡೆಲಿವರಿ ಬಾಯ್ (Swiggy Deliver Boy) ಆಗಿ ಕೆಲಸ ಮಾಡಿಕೊಂಡಿದ್ದು, ಅಮೃತಹಳ್ಳಿ ಬಳಿ ಇರುವ ಈಶ್ವರ ದೇವಸ್ಥಾನದ ಬಳಿ ರೂಂ ಮಾಡಿಕೊಂಡಿದ್ದರು. ಹಲ್ಲೆ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.