ಬೆಂಗಳೂರು: ಭರ್ಜರಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ತನ್ನ ಓಟಕ್ಕೆ ಬ್ರೇಕ್ ಹಾಕಿವೆ. ಮಲೇಷ್ಯಾದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, ಬಿಟ್ಟರೆ ಭಾರತ ಹಾಗೂ ವಿಶ್ವದ ವಿವಿಧೆಡೆ ಚಿನ್ನದ ಬೆಲೆ ಅಲ್ಪವಿರಾಮ ಪಡೆದಿದೆ.
ದೇಶದಲ್ಲಿ ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,600 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,650 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,350 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,650 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,350 ರೂ. ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70 ಸಾವಿರ ರೂ. ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 8ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,650 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,700 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,890 ರಿಂಗಿಟ್ (51,818 ರುಪಾಯಿ)
ದುಬೈ: 2200 ಡಿರಾಮ್ (49,456 ರುಪಾಯಿ)
ಅಮೆರಿಕ: 600 ಡಾಲರ್ (49,547 ರುಪಾಯಿ)
ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,344 ರುಪಾಯಿ)
ಕತಾರ್: 2,265 ಕತಾರಿ ರಿಯಾಲ್ (51,372 ರೂ)
ಓಮನ್: 239.50 ಒಮಾನಿ ರಿಯಾಲ್ (51,536 ರುಪಾಯಿ)
ಕುವೇತ್: 188 ಕುವೇತಿ ದಿನಾರ್ (50,445 ರುಪಾಯಿ)