ಚಿತ್ರದುರ್ಗ: ರಸ್ತೆ ಪಕ್ಕ ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ.
ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅಂಬುಲೆನ್ಸ್ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದ ಅಂಬುಲೆನ್ಸ್ ನಲ್ಲಿದ್ದ ಚಾಲಕ, ಕನಕಮಣಿ (72) ಹಾಗೂ ಆಕಾಶ್ (17) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.