ಬೆಂಗಳೂರು : ಡಿ.ಕೆ.ಶಿವಕುಮಾರ್ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಹೊತ್ತಿದ್ದ ಹರಕೆ ತೀರಿಸುತ್ತಿದ್ದಾರೆ.
ಮಧ್ಯಾಹ್ನ 2ಕ್ಕೆ ಮಧ್ಯಪ್ರದೇಶದ ದಾಟಿಯಾದ ‘ಬಾಗ್ಲಾಮುಖಿ ಪೀತಾಂಬರ ಶಕ್ತಿ ಪೀಠ’ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಅದೇ ದಿನ ರಾತ್ರಿ ದೇಶದ 18 ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ‘ಮಹಾಕಾಲೇಶ್ವರ ಮಂದಿರ’ವಿರುವ ಉಜ್ಜಯಿನಿಯಲ್ಲಿ ಉಳಿದುಕೊಳ್ಳಲಿದ್ದಾರೆ.
ಭಾನುವಾರ ಬೆಳಿಗ್ಗೆ 4ಕ್ಕೆ ಡಿ.ಕೆ.ಶಿವಕುಮಾರ್ ಅವರು ಮಹಾಕಾಲೇಶ್ವರನಿಗೆ ನಡೆಯುವ ಭಸ್ಮಾರತಿ ಪೂಜೆಯಲ್ಲಿ ಭಾಗಿಯಾಗಿ ತಮ್ಮ ಹರಕೆ ಪೂರೈಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಬೆಂಗಳೂರಿಗೆ ವಾಪಸ್ಸಾಗಿ ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯದ ‘ಶಕ್ತಿ’ ಗ್ಯಾರಂಟಿ ಯೋಜನೆಯ ಅಧಿಕೃತ ಜಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.