Kornersite

Bengaluru Just In Karnataka Politics State

ಮಹಿಳೆಯರಿಂದ ತುಂಬಿ ತುಳುಕುತ್ತಿರುವ ಬಿಎಂಟಿಸಿ; ವೋಲ್ವೋ ಮೊರೆ ಹೋದ ಪುರುಷ ಪ್ರಯಾಣಿಕರು!

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (Free Bus Travel) ಭಾಗ್ಯ ಕರುಣಿಸಿದ್ದರಿಂದಾಗಿ ಮಹಿಳೆಯರು ಸರ್ಕಾರಿ ಬಸ್ ಏರುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ (BMTC) ಬಸ್‌ಗಳು ಫುಲ್ ರಶ್ ಆಗುತ್ತಿದ್ದು, ಪುರುಷರಿಗೆ ದಿಕ್ಕೇ ತೋಚದಂತಾಗಿ ವೋಲ್ವೋ (Volvo) ಬಸ್‌ ಗಳ ಮೊರೆ ಹೋಗಿದ್ದಾರೆ.

ಶಕ್ತಿ ಯೋಜನೆ (Shakti Scheme) ಜಾರಿಗೆ ಬಂದಮೇಲೆ ಐಷಾರಾಮಿ ಬಸ್‌ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ತುಂಬಾ ಕ್ಷೀಣವಾಗಿದೆ. ಹೀಗಾಗಿ ಪ್ರಯಾಣಿಕರ ಇಳಿಕೆಯ ಆತಂಕವಿತ್ತು. ಆದರೆ ಬಿಎಂಟಿಸಿಯ ಐಷಾರಾಮಿ ಬಸ್‌ಗಳಿಗೆ ಶಕ್ತಿ ಯೋಜನೆ ಬೊಕ್ಕಸ ತುಂಬಿಸುತ್ತಿದೆ. ಕಳೆದ ಒಂದು ವಾರದಲ್ಲಿ ವೋಲ್ವೋ ಮತ್ತು ವಜ್ರ (Vajra) ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಾಗಿದೆ. ಸಾಮಾನ್ಯ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿರುವುದರಿಂದ ಪುರುಷ ಪ್ರಯಾಣಿಕರು ವೋಲ್ವೋ ಬಸ್‌ ಹತ್ತುತ್ತಿದ್ದಾರೆ. ಹೀಗಾಗಿ ವೋಲ್ವೋ ಬಸ್ ಗಳಲ್ಲಿ 10 ಸಾವಿರ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

ಪ್ರತಿನಿತ್ಯ ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿಯ 470 ವೋಲ್ವೋ ಬಸ್‌ಗಳು ಓಡಾಡುತ್ತಿವೆ. ವೋಲ್ವೋ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ 3-5% ಏರಿಕೆಯಾಗಿದ್ದು, ಜೂನ್ ತಿಂಗಳ 21 ದಿನಗಳ ಲೆಕ್ಕಾಚಾರದ ಪ್ರಕಾರದ ಪ್ರತಿದಿನ 1,16,000 ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಸದ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಬಿಎಂಟಿಸಿ ವೋಲ್ವೋ ಬಸ್‌ಗಳಲ್ಲಿಯೂ ಗಣನೀಯವಾಗಿ ಪುರುಷ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು