ICC World Cup 2023: ಈ ವರ್ಷದ ಕೊನೆಯಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ.
ಈ ವರ್ಷ ಭಾರತವು ಮೊದಲ ಬಾರಿಗೆ ಸಂಪೂರ್ಣವಾಗಿ ಏಕದಿನ ವಿಶ್ವಕಪ್ ಆತಿಥ್ಯವನ್ನು ವಹಿಸಿಕೊಂಡಿದೆ. ಎಲ್ಲಾ ಪಂದ್ಯಗಳು ಭಾರತದಲ್ಲೇ ನಡೆಯಲಿವೆ. ಅಕ್ಟೋಬರ್ 5ರಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ದ ವಿಶ್ವಕಪ್ ಆರಂಭಗೊಳ್ಳಲಿದೆ. ಪ್ರದರ್ಶನ ಸಮಾರಂಭದಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಲಿವೆ, ಮೊದಲ ಎಂಟು ತಂಡಗಳು ಈಗಾಗಲೇ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್ ಮೂಲಕ ಅರ್ಹತೆ ಪಡೆದಿವೆ.
ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ್ ಮ್ಯಾಚ್ ಅಕ್ಟೋಬರ್ 15 ಭಾನುವಾರ ಅಹಮದಾಬಾದ್ ನಲ್ಲಿ ನಡೆಯಲಿದೆ. ಅಕ್ಟೋಬರ್ 20 ರಂದು ಪಾಕಿಸ್ತಾನವು ಬೆಂಗಳೂರಿನಲ್ಲಿ ಆಸ್ತ್ರೇಲಿಯಾವನ್ನು ಎದುರಿಸಲಿದೆ. ಮೊದಲ ಸೆಮಿಫೈನಲ್ ನವೆಂಬರ್ 15 ರಂದು ಮುಂಬೈ ನಲ್ಲಿ ನಡೆಯಲಿದೆ. ಎರಡನೇ ಸೆಮಿಫೈನಲ್ ಮರುದಿನ ಅಂದ್ರೆ ನವೆಂಬರ್ 16ರಂದು ಕೊಲ್ಕತ್ತಾದಲ್ಲಿ ನಡೆಯಲಿದೆ.