Kornersite

Bengaluru Just In Karnataka Politics State

ವಿದ್ಯಾರ್ಥಿನಿಗೆ ಮರಳಿ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರಾಜ್ಯದ ಜನರ ಬಗ್ಗೆ ಎಷ್ಟು ಕಾಳಜಿ ಎನ್ನುವುದನ್ನ ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ (Siddaramaiah). ಕೊಪ್ಪಳ(Koppal)ದ ವಿದ್ಯಾರ್ಥಿನಿ(Student)ಯೊಬ್ಬಳು ಬರೆದ ಪತ್ರ (Letter)ಕ್ಕೆ, ಮರಳಿ ಪತ್ರ ಬರೆದಿದ್ದಾರೆ ಸಿಎಂ ಸಿದ್ದರಾಮಯ್ಯ.

ಅಸಲಿಗೆ ಕೊಪ್ಪಳದ ಮಾಸ್ತಿ ಪಬ್ಲಿಕ್ ಸ್ಕೂಲ್‌ನಲ್ಲಿ 8ನೇ ತರಗತಿಯಲ್ಲಿ ಶ್ರೆಯಾಂಕ .ವಿ. ಮೆಣಸಗಿ ಎನ್ನುವ ವಿದ್ಯಾರ್ಥಿನಿ ವ್ಯಾಸಾಂಗ ಮಾಡುತ್ತಿದ್ದಾಳೆ. ಈಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಕಾಳಜಿಯ ಬಗ್ಗೆ ಪತ್ರ ಬರೆದಿದ್ದಳು.

ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮದ ಕುರಿತು ಬರೆದಿದ್ದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾಳೆ. ಜೊತೆಗೆ ಈ ಬಾರಿಯೂ ಉತ್ತಮ ಆಡಳಿತ ನಡೆಸಲು ವಿದ್ಯಾರ್ಥಿಯ ಮನವಿ ಮಾಡಿಕೊಂಡಿದ್ದಾಳೆ.

ಈಕೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ ಕಳುಹಿಸಿದ್ದಾರೆ. ಇದರಲ್ಲಿ ನಿನ್ನ ಪತ್ರ ಓದಿ ಸಂತಸವಾಗಿದೆ.

ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು ಎಂದು ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದಿದ್ದಾರೆ ಸಿಎಂ ಸಿದ್ಧರಾಮಯ್ಯ. ಸಿಎಂ ನನಗೆ ಉತ್ತರ ನೀಡಿದ್ದಾರೆ. ಮರಳಿ ಪತ್ರ ಬರೆದಿದ್ದಾರೆ ಎಂದು ವಿದ್ಯಾರ್ಥಿನಿ ಖುಷಿಯಿಂದ ಕುಪ್ಪಳಿಸುತ್ತಿದ್ದಾಳೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು