Kornersite

Just In State Tech

ಚಂದ್ರಯಾನ-3 ಯಶಸ್ವಿ ಉಡಾವಣೆ: ಹೇಗಿತ್ತು ನೋಡಿ ಆ ಗೌರವದ ಕ್ಷಣ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ಚಂದ್ರಯಾನ-3 (Chandrayaan-3) ಇಂದು ಮಧ್ಯಾನ್ಹ್ 2.35 ಕ್ಕೆ ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಈ ಉಡಾವಣೆ ಯಶಸ್ವಿಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ನ್ನು ಹೊತ್ತ ಜಿಎಸ್ ಎಲ್ ವಿ ಮಾರ್ಕ್-3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಚಂದ್ರಯಾನ-3 ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈ ಯಲ್ಲಿ ಸುಲಭವಾಗಿ ಇಳಿಸುವ ಆರು ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ.

ಚಂದ್ರಯಾನ-3 ಲ್ಯಾಂಡರ್ ರೋವರ್ ಹಾಗೂ ಪ್ರೊಪಲ್ಷನ್ ಮಾಡ್ಯೂಲ್ ಹೊಂದಿದೆ. 3,900 ಕಿಲೋಗ್ರಾಂಗಳಷ್ಟು ಭಾರವನ್ನು ಈ ಚಂದ್ರಯಾನ-3 ಹೊಂದಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ