284 ನಗರಗಳಲ್ಲಿ 808 FM Radio ಕೇಂದ್ರಗಳನ್ನು ಸ್ಥಾಪಿಸಲು ಮುಂದಾದ ಕೇಂದ್ರ ಸರ್ಕಾರ - Kornersite

Kornersite

Just In Karnataka National State

284 ನಗರಗಳಲ್ಲಿ 808 FM Radio ಕೇಂದ್ರಗಳನ್ನು ಸ್ಥಾಪಿಸಲು ಮುಂದಾದ ಕೇಂದ್ರ ಸರ್ಕಾರ

ರೇಡಿಯೊ ಸಂವಹನ ವಿಸ್ತರಿಸಲು ಮುಂದಾಗಿರುವ ಕೇಂದ್ರ ಸರ್ಕಾರ 284 ನಗರಗಳಲ್ಲಿ 808 ಎಫ್‌ಎಂ ರೇಡಿಯೊ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ.

ಹೀಗಾಗಿ ಸದ್ಯದಲ್ಲಿಯೇ ಇ-ಹರಾಜು ಪ್ರಕ್ರಿಯೆ ನಡೆಸಲಾಗಿವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಪ್ರಾದೇಶಿಕ ಸಮುದಾಯ ರೇಡಿಯೊ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 26 ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿನ 113 ನಗರಗಳಲ್ಲಿ 388 FM ರೇಡಿಯೋ ಕೇಂದ್ರಗಳನ್ನು ಹೊಂದಿದೆ. ರೇಡಿಯೋ ಸೇವೆಗಳನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಚಿಂತಿಸಿದ್ದು, 284 ನಗರಗಳಲ್ಲಿ 808 ಚಾನೆಲ್‌ಗಳ ಮೂರನೇ ಬ್ಯಾಚ್ ಇ-ಹರಾಜನ್ನು ಯೋಜಿಸುತ್ತಿದೆ ಎಂದು ಠಾಕೂರ್ ಮಾಹಿತಿ ನೀಡಿದ್ದಾರೆ.

ದೂರದ, ಬುಡಕಟ್ಟು, ಎಲ್‌ಡಬ್ಲ್ಯೂಇ ಪೀಡಿತ ಮತ್ತು ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಂಟು ಲಕ್ಷಕ್ಕೂ ಹೆಚ್ಚು ಡಿಡಿ ಉಚಿತ ಡಿಶ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಉಚಿತವಾಗಿ ವಿತರಿಸುವ ಗುರಿಯನ್ನು ಈ ಯೋಜನೆ ಮೂಲಕ ಹೊಂದಲಾಗಿದೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ