ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಮೂರು ಚಾಲಕ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಅರ್ಜಿಯನ್ನು ಸಪ್ಟೆಂಬರ್ 8 ಕೊನೆಯ ದಿನಾಂಕ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಏಳನೇ ತರಗತಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21 ಸಾವಿರದಿಂದ 42 ಸಾವಿರ.
ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು
ಕಾರ್ಯದರ್ಶಿ
ಅಸೆಂಬ್ಲಿ ಸಚಿವಾಲಯ
ಕರ್ನಾಟಕ ಅಂಚೆ ಪೆಟ್ಟಿಗೆ ಸಂಖ್ಯೆ. 5074
1ನೇ ಮಹಡಿ
ವಿಧಾನಸೌಧ, ಬೆಂಗಳೂರು-560001