ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತರು ಸಂಜೆಯಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಕೆಆರ್ ಎಸ್ ಆಣೆಕಟ್ಟೆ ಸಮೀಪ, ಬೃಂದಾವನ ಪ್ರವೇಶ ದ್ವಾರದ ಬಳಿ ಧರಣಿ ನಡೆಯುತ್ತಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರ. ತಮಿಳುನಾಡಿಗೆ ನೀರು ಹರಿಸುವಂತೆ ನಿರ್ದೇಶನ ನೀಡುವುದು ಒಪ್ಪುವ ವಿಷಯವಲ್ಲ. ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವವರೆಗೆ ಧರಣಿ ನಡೆಯಲಿದೆ ಎಂದು ದರ್ಶನ್ ಪುಟ್ಟಣಯ್ಯ ಹೇಳಿದ್ದಾರೆ. ಈ ಸಂದರ್ಭದಲ್ಲಿ ರೈತ್ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್. ಕೆಂಪೂಗೌಡ, ಕೆನ್ನಾಳು ನಾಗರಾಜು, ವಿಜಯಕುಮಾರ್, ಮರಳಾಗಾಲ ಕೃಷ್ಣೌಡ, ಹರವು ಪ್ರಕಾಶ್, ಅರಕೆರೆ ಪ್ರಸನ್ ಎನ್.ಗೌಡ ಸೇರಿದಂತೆ ಹಲವರು ಇದ್ದರು.