ನೆಲಮಂಗಲ: ಗೌರಿ-ಗಣೇಶ ಹಬ್ಬದ(Gowri Ganesha Festival) ಹಿನ್ನೆಲೆಯಲ್ಲಿ ಮನೆಯವರೆಲ್ಲ ಊರಿಗೆ ತೆರಳಿದ್ದ ಸಂದರ್ಭದಲ್ಲಿಯೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಮನೆ ಮಂದಿಯೆಲ್ಲ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು ಮನೆ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ಅಮೀತ್ ಭೀಮಯ್ಯ ಮನೆಯ ಡೋರ್ ಲಾಕ್ ಹೊಡೆದು ಕಳ್ಳತನ(Thieft) ಮಾಡಲಾಗಿದೆ. 5 ಸಾವಿರ ರೂ. ನಗದು, 2 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.
ಕುಟುಂಬಸ್ಥರು ಮನೆಗೆ ಮರಳಿ ಬಂದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.