ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾನ್ಯತೆ ನವೀಕರಿಸುವ ಸಲುವಾಗಿ ಕಟ್ಟಡ ಸುರಕ್ಷತೆ ಸೇರಿದಂತೆ ಹಲವು ಪ್ರಮಾಣ ಪತ್ರಗಳನ್ನು ನೀಡಬೇಕಾಗಿತ್ತು. ಆದರೆ, ಸಕಾಲದಲ್ಲಿ ಇವುಗಳನ್ನು ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಚ್ಚಳಿಕೆ ಪತ್ರ ಪಡೆದು ಮಾನ್ಯತೆ ನವೀಕರಿಸಲು ತೀರ್ಮಾನಿಸಲಾಗಿದೆ.
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಶಾಲಾ ಆಡಳಿತ ಮಂಡಳಿಯಿಂದ ಮುಚ್ಚಳಿಕೆ ಪತ್ರ ಪಡೆದು ವರ್ಷಕ್ಕೆ ಸೀಮಿತವಾಗುವಂತೆ ಮಾನ್ಯತೆ ನವೀಕರಿಸಲಾಗುತ್ತಿದ್ದು, ಕಟ್ಟಡ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತೆ ಪ್ರಮಾಣ ಪತ್ರ, ಭೂ ಪರಿವರ್ತನಾ ಆದೇಶ ಪತ್ರಗಳನ್ನು ಸಲ್ಲಿಸಬೇಕಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿರುವ ಬಿ.ಬಿ. ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ.