ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೈಜ್ ಮನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿದ್ದು, ಕ್ಯೂರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ದ್ವಿತೀಯ ಪಿಯುಸಿ, 3ನೇ ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20 ಸಾವಿರ ರೂ. ಪ್ರೋತ್ಸಾಹ ಧನ, ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ಪ್ರೋತ್ಸಾಹ ಧನ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30 ಸಾವಿರ ರೂ. ಪ್ರೋತ್ಸಾಹ ಧನ, ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಪದವಿಗೆ 35 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ.