ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡು 9 ಜನ ಬಲಿ!
ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 9 ಜನ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಅಲ್ಲದೇ, ಘಟನೆಯಲ್ಲಿ ಹಲವು ಜನ ಗಾಯಗೊಂಡಿದ್ದಾರೆ. ಈ ಕುರಿತು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ಆರಂಭಿಸಿದೆ.ಇದ್ದಕ್ಕಿದ್ದಂತೆ ಭಾರಿ ಸ್ಫೋಟವೊಂದು ಕೇಳಿಬಂದಿತ್ತು, ಕಾರ್ಖಾನೆಯ ಮೇಲ್ಛಾವಣಿ ಹಾರಿಹೋಗಿರುವುದನ್ನು ನೋಡಿದ್ದಾರೆ. ಜನರ ಮೃತ ದೇಹಗಳು ಛಿದ್ರವಾಗಿ ಬಿದ್ದಿವೆ. ಕೆಲವರ ದೇಹಗಳು ರಸ್ತೆಯಲ್ಲಿ ಬಿದ್ದಿವೆ. ಅದರಲ್ಲಿ ಹಲವರು ಸುಟ್ಟು ಕರಕಲಾಗಿದ್ದಾರೆ. ಮಾಹಿತಿ […]