ರಾಜ್ಯದಲ್ಲಿ ಮತದಾನಕ್ಕೆ 1.60 ಲಕ್ಷ ಪೊಲೀಸ್ ಸಿಬ್ಬಂಧಿ ನಿಯೋಜನೆ: ಅಲೋಕ್ ಕುಮಾರ್
ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಸಕಲ ಸಿಧ್ದತೆಗಳು ನಡೆದಿವೆ. ಇನ್ನು ಪೊಲೀಸ್ ಇಲಾಖೆಯಂತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಟೊಂಕ ಕಟ್ಟಿ ನಿಂತಿದೆ. ಇದಕ್ಕಾಗಿ ರಾಜ್ಯದಲ್ಲಿ ಬರೋಬ್ಬರಿ 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸುಸೂತ್ರವಾಗಿ ಮತದಾನ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ. ಈಗಾಗಲೇ ಒಟ್ಟು 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಕಾನೂನು ಮತ್ತು […]